ಕುಖ್ಯಾತ ಡಕಾಯಿತರ ಬಂಧನ !

Kannada News

27-06-2017 287

ಹುಬ್ಬಳ್ಳಿ: ಇಬ್ಬರು ಕುಖ್ಯಾತ ಡಕಾಯಿತರನ್ನು ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.  ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಬಳಿ ಮಾರಕಾಸ್ತ್ರಗಳನ್ನು ತೋರಿಸಿ ಸಾರ್ವಜನಿಕರನ್ನು ಹೆದರಿಸಿ, ಬೆಲೆ ಬಾಳುವ ವಸ್ತುಗಳು ಮತ್ತು ಚಿನ್ನದ ಆಭರಣಗಳು, ಇನ್ನಿತರ ವಸ್ತುಗಳನ್ನು ದೋಚುತ್ತಿದ್ದ, ಶರೀಫ್ ಮೌಲಾಸಾಭ್ ಮತ್ತು ಮುತ್ತುರಾಜ ಟಗರಗುಂಟಿ ಬಂಧಿತರಾಗಿದ್ದಾರೆ. ಇನ್ನೂ ಮೂವರು ಡಕಾಯಿತರು ಪರಾರಿಯಾಗಿದ್ದು, ಪತ್ತೆಗಾಗಿ ಬಲೆ ಬೀಸಿದ್ದಾರೆ. ಹುಬ್ಬಳ್ಳಿಯ ಪಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಹೋಗುತ್ತಿದ್ದವರನ್ನೇ ಟಾರ್ಗೆಟ್ ಮಾಡುತ್ತಿದ್ದ ಗ್ಯಾಂಗ್ ನ ಖಚಿತ ಮಾಹಿತಿ ಮೇರೆಗೆ ಸಬ್ ಇನ್ಸ್ ಪೆಕ್ಟರ್ ನವೀನ್ ಜಕ್ಕಲಿ ಮತ್ತು ಸಿಬ್ಬಂದಿಗಳ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇನ್ನು ನಾಪತ್ತೆಯಾದ ಮೂವರು ಡಕಾಯಿತರಿಗಾಗಿ ಶೋಧ ಮಾಡುತ್ತಿದ್ದಾರೆ. ಬಂಧಿತರಿಂದ ಮಾರಕಾಸ್ತ್ರ,ಕಾರದಪುಡಿ ಪ್ಯಾಕೆಟ್ ಗಳು, ಮತ್ತು ಕಾರೊಂದನ್ನು ವಶಪಡಿಸಿಕೊಂಡಿದ್ದಾರೆ.

 

 
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ