ಮೈಸೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ !

Kannada News

27-06-2017 183

ಮೈಸೂರು: ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ನಡೆಸಲಾಯಿತು. ಜಿಲ್ಲಾಡಳಿತದಿಂದ ನಾಡಪ್ರಭು ಕೆಂಪೇಗೌಡರ ಪುತ್ಥಳಿಯ ಅದ್ದೂರಿ ಮೆರವಣಿಗೆ ಆಯೋಜಿಸಲಾಗಿತ್ತು, ಮೈಸೂರು ಅರಮನೆಯ ಬಲರಾಮ ದ್ವಾರದ ಬಳಿಯಿರುವ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿಯಿಂದ ಹೊರಟ ಮೆರವಣಿಗೆಯಲ್ಲಿ, ಡೊಳ್ಳುಕುಣಿತ, ವೀರಗಾಸೆ, ತಮಟೆ ನಗಾರಿ, ಗಾರುಡಿ ಗೊಂಬೆ, ಕಂಸಾಳೆ ಸೇರಿದಂತೆ ವಿವಿಧ ಜನಪದ ಕಲಾಪ್ರಕಾರಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ಹರ್ಷದಿಂದ ಎಲ್ಲರೂ ಕುಣಿದಾಡಿದರು. ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಶಾಸಕ ಜಿ.ಟಿ ದೇವೇಗೌಡ, ಮೇಯರ್ ರವಿಕುಮಾರ್, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜಳಾ ಮಾನಸ ಭಾಗಿಯಾಗಿದ್ದರು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ