ಗೋ ಮಾಂಸ ಸೇವಿಸಿರುವವರನ್ನು ಬಂಧಿಸಿ !

Kannada News

27-06-2017

ಮೈಸೂರು: ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಮೈಸೂರಿನ ಕಲಾಮಂದಿರದ ಕಾರ್ಯಕ್ರಮದ ವಿರುದ್ಧ, ಬಿಜೆಪಿ ಪ್ರತಿಭಟನೆ ನಡೆಸಿದೆ. ಕಲಾಮಂದಿರದ ಮನೆಯಂಗಳದಲ್ಲಿ ಗೋ ಮಾಂಸ ಸೇವನೆ ಮಾಡಿರುವ, ಪ್ರಗತಿಪರ ಸಂಘಟನೆಗಳ ಪ್ರಮುಖರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಮೈಸೂರಿನ ಎಫ್.ಟಿ.ಎಸ್ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಲಾಮಂದಿರದ ಮನೆಯಂಗಳದಲ್ಲಿ ಗೋಮಾಂಸ ಸೇವನೆ ಮಾಡಿರುವ ಪ್ರಗತಿಪರರನ್ನು ಕೂಡಲೇ ಬಂಧಿಸಬೇಕು. ಗೋ ಮಾಂಸ ಸೇವನೆಗೆ ಅವಕಾಶ ಮಾಡಿಕೊಟ್ಟ ಕಲಾಮಂದಿರದ ಸಿಬ್ಬಂದಿ ವರ್ಗದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಮತ್ತು, ಕಾರ್ಯಕ್ರಮದ ಆಯೋಜಕರು ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು, ಈ ಕೂಡಲೇ ಪ್ರಗತಿಪರ ಸಂಘಟನೆಗಳ ಪ್ರಮುಖರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ