ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ !

Kannada News

27-06-2017

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದೂ, ಜುಲೈ 2 ನೇ ವಾರದಲ್ಲಿ ಸಂಪುಟ ವಿಸ್ತರಣೆ ಮಾಡುವ ವಿಚಾರ ಕುರಿತು ಸಿಎಂ ದೆಹಲಿಗೆ ತೆರಳಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಯುಪಿಎ ಅಭ್ಯರ್ಥಿ ಮೀರಾಕುಮಾರ್ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ, ನಾಳೆ ದೆಹಲಿಗೆ ತೆರಳಿರುವ ಸಿಎಂ ಸಿದ್ಧರಾಮಯ್ಯ. ಮೀರಾಕುಮಾರ್ ಅವರು ನಾಮಪತ್ರ ಸಲ್ಲಿಕೆಯ ನಂತರ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ. ಸಚಿವ ಸಂಪುಟ ವಿಸ್ತರಿಸುವ ಬಗ್ಗೆ ಹೈಕಮಾಂಡ್ ನೊಂದಿಗೆ ಚರ್ಚಿಸಲಿದ್ದೂ, ಸಂಪುಟದಲ್ಲಿ ಖಾಲಿಯಿರುವ ಮೂರು ಸ್ಥಾನಗಳ ಭರ್ತಿಗೆ ಈಗಾಗಲೇ ಸಿಎಂ ನಿರ್ಧಾರಿಸಿದ್ದಾರೆ, ಗೃಹ ಸಚಿವ ಸ್ಥಾನಕ್ಕೆ ಇಬ್ಬರ ಹೆಸರನ್ನು ಅಂತಿಮಗೊಳಿಸಿದ್ದೂ, ಹಿರಿಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಇದು ಚುನಾವಣಾ ವರ್ಷವಾಗಿರುವುದರಿಂದ ಯಾವುದೇ ಪ್ರಯೋಗ ಬೇಡ ಎಂದಿರುವ ಹೈಕಮಾಂಡ್. ಸಂತೋಷ್ ಲಾಡ್, ಉತ್ಸಾಹಿ ಸಚಿವ. ಉತ್ತರಾಖಂಡ್ ಪ್ರವಾಹದ ಪರಿಸ್ಥಿತಿಯಲ್ಲಿ ಒಳ್ಳೆಯ ಕೆಲಸ ಮಾಡಿದ ಹಿನ್ನೆಲೆಯಲ್ಲಿ. ಗೃಹ ಖಾತೆ ನಿಭಾಯಿಸುತ್ತಾರೆ ಎಂದಿರುವ ಸಿಎಂ. ರಾಮಲಿಂಗಾರೆಡ್ಡಿ, ಅನುಭವಿ ಸಚಿವ. ರಾಜ್ಯದಲ್ಲಿ ಈ ವರ್ಷ ಕಾನೂನು ಸುವ್ಯವಸ್ಥೆ ಕಾಪಾಡುವುದು ಅನಿವಾರ್ಯ. ಇಲ್ಲವಾದರೆ. ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಹೀಗಾಗಿ ರಾಮಲಿಂಗಾರೆಡ್ಡಿ ಅವರಿಗೆ ಮೊದಲ ಪ್ರಾಶಸ್ತ್ಯ ಎಂದೂ ತಿಳಿಸಿದ್ದಾರೆ. ಹೈಕಮಾಂಡ್ ಮುಂದೆ ಎಲ್ಲಾ ವಿಚಾರಗಳನ್ನು ಸವಿಸ್ತಾರವಾಗಿ ವಿವರಿಸಲಿದ್ದೂ, ಇದೀಗ ಎಲ್ಲರ ಗಮನ ದೆಹಲಿಯಲ್ಲಿ ಕೇಂದ್ರಿತವಾಗಿದೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ