ಕಲಾಮಂದಿರದಲ್ಲಿ ಗೋಮಾಂಸ ತಿಂದಿರುವುದು ಅಪರಾಧ !

Kannada News

27-06-2017

ಬಳ್ಳಾರಿ: ಸಾಂಸ್ಕೃತಿಕ ನಗರಿ ಮೈಸೂರಿನ ಕಲಾ ಮಂದಿರದಲ್ಲಿ ಗೋ ಮಾಂಸ ತಿಂದು ಅಪಚಾರವೆಸಗಿದವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇಂತಹವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕಲಾ ಮಂದಿರದಲ್ಲಿ ಸಾರ್ವಜನಿಕವಾಗಿ ಗೋಮಾಂಸ ತಿಂದಿರುವುದು ಅಕ್ಷಮ್ಯ ಅಪರಾಧ. ಇಂತಹ ನೀಚ ಕೃತ್ಯ ಎಸಗಿರುವವರನ್ನು ಬಹಿಷ್ಕರಿಸಬೇಕು. ವಿಚಾರವಾದಿಗಳೆಂದು ಬಡಾಯಿ ಕೊಚ್ಚಿಕೊಳ್ಳುವ ಅಂತಹವರ ಈ ಅಪರಾಧವನ್ನು ಯಾರೂ ಕ್ಷಮಿಸುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು. ಬೇಕಾದರೆ ಅವರು ಅವರವರ ಮನೆಯಲ್ಲಿ ಏನನ್ನಾದರೂ ತಿಂದು ಸಾಯಲಿ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ವರ್ತನೆ ಸಲ್ಲದು. ಅವರ ವಿರುದ್ಧ ರಾಜ್ಯ ಸರ್ಕಾರ ಕೂಡಲೆ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  ಈ ಸಂದರ್ಭ ಸಂಸದ ಬಿ.ಶ್ರೀರಾಮುಲು ಮತ್ತಿತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ