ಶಿಕ್ಷಣ ಸಚಿವರ ಮನೆಗೆ ಮುತ್ತಿಗೆಯ ಎಚ್ಚರಿಕೆ !

Kannada News

27-06-2017

ಬೆಂಗಳೂರು: ಆನ್ ಲೈನ್ ಮೂಲಕ ಹೊಸದಾಗಿ ಅತಿಥಿ ಉಪನ್ಯಾಸಕರ ನೇಮಕ ಕೈಬಿಟ್ಟು, ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನೇ ಮುಂದುವರೆಸಬೇಕು ಎಂದು ರಾಜ್ಯಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳ ಸಂಘ ಒತ್ತಾಯಿಸಿದೆ. 2017-18ನೇ ಸಾಲಿಗೆ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಮುಂದುವರೆಸದೆ ಹೊಸದಾಗಿ ಆನ್ ಲೈನ್ ಮೂಲಕ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವ ಹಾಗೂ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೂ ಮುಂದುವರೆಸುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತಜ್ಞರ ಸಮಿತಿ ರಚಿಸುವುದಾಗಿ ಭರವಸೆ ನೀಡಿದ್ದ ಉನ್ನತ ಶಿಕ್ಷಣ ಸಚಿವರು, ಏಕಾಏಕಿ ಹೊಸದಾಗಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಮುಂದಾಗಿದ್ದಾರೆ, ಎಂದು ಸಂಘದ ರಾಜ್ಯಾಧ್ಯಕ್ಷಶ್ರೀನಿವಾಸಚಾರ್ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಸರ್ಕಾರದ ಈ ಕ್ರಮದಿಂದ ವಯೋಮಿತಿ ಮೀರಿದ ಅತಿಥಿ ಉಪನ್ಯಾಸಕರು ಕೆಲಸ ಕಳೆದು ಕೊಳ್ಳಲಿದ್ದಾರೆ. ಪಿ.ಎಚ್.ಡಿ, ನೆಟ್, ಪದವಿಗಳಿಗೆ 30 ಅಂಕ ನೀಡುವ ಮೂಲಕಹೊಸ ಅತಿಥಿ ಉಪನ್ಯಾಸಕರ ನೇಮಕಕ್ಕೆ ಮುಂದಾಗಿರುವ ಸರ್ಕಾರ, ಪ್ರಸ್ತುತ ಸೇವೆಯಲ್ಲಿರುವ ಉಪನ್ಯಾಸಕರನ್ನು ಹೊರಗಿಡುವ ಉದ್ದೇಶ ಹೊಂದಿದೆ ಎಂದ ಅವರು, ಈ ಕುರಿತು ಸರ್ಕಾರ ಮರು ಅದೇಶ ಹೊರಡಿಸದಿದ್ದರೆ ಮುಂಬರುವ ಜುಲೈ  4ರಂದು ಉನ್ನತ ಶಿಕ್ಷಣ ಸಚಿವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ