ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ ಸಾರ್ವಜನಿಕರ ಪರದಾಟ !

Kannada News

28-06-2017

ಮಂಗಳೂರು: ಮಂಗಳೂರಿನ ಹೊರವಲಯದ ಪಡೀಲ್ ರೈಲ್ವೆ ಓವರ್ ಬ್ರಿಡ್ಜ್ ಬಳಿ ರಸ್ತೆ ತೀರ ಹದಗೆಟ್ಟಿದ್ದರಿಂದ, ರಸ್ತೆಯ ಮಧ್ಯದಲ್ಲೇ ಲಾರಿಯೊಂದು ಕೆಟ್ಟು ನಿಂತಿದ್ದು, ಇಂದು ಬೆಳಗ್ಗೆಯಿಂದಲೇ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಇದರಿಂದಾಗಿ ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ, ಉದ್ಯೋಗಕ್ಕೆ ತೆರಳುವವರಿಗೆ ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಉಂಟಾಯಿತು. ಪಡೀಲ್ ರೈಲ್ವೆ ಓವರ್ ಬ್ರಿಡ್ಜ್ ಬಳಿ ಈಗಾಗಲೇ ರಸ್ತೆಗೆ ಸಮನಾಂತರವಾಗಿ ನೂತನ ರಸ್ತೆ ನಿರ್ಮಾಣ ಮಾಡಲಾಗಿದೆ. ಇಲ್ಲಿ ಕಾಮಗಾರಿ ನಡೆದು ಹಲವು ತಿಂಗಳಾದರು, ಇನ್ನೂ ಕೂಡ ಹೊಸ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿಲ್ಲ. ಅಲ್ಲದೇ ರೈಲ್ವೆ ಮೇಲ್ಸೇತುವೆ ಸಮೀಪದಲ್ಲಿಯೇ ಇರುವ ಗುಡ್ಡೆಯಿಂದ ಹರಿಯುವ ನೀರು ರಸ್ತೆಯಲ್ಲೇ ಹರಿದು ಹೋಗುವುದರಿಂದ, ಈ ಪ್ರದೇಶ ಹೊಂಡದಿಂದ ತುಂಬಿ ಹೋಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಕಣ್ಣುಮುಚ್ಚಿ ಕುಳಿತುಕೊಂಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ