ಸರ್ಕಾರದ ಹಣದಲ್ಲಿ ಖಾಸಗಿ ಕಂಪನಿಗೆ ರಸ್ತೆ..?

Kannada News

28-06-2017

ಮೈಸೂರು: ಸರ್ಕಾರದ ನೀರಾವರಿ ಇಲಾಖೆ ಹಣದಲ್ಲೇ‌ ಖಾಸಗಿ ಕಂಪನಿಗೆ ರಸ್ತೆ ನಿರ್ಮಿಸುತ್ತಿದ್ದಾರೆಂದು ಆರೋಪಿಸಿ, ಕಬಿನಿ ಜಲಾಶಯದ ಕಾರ್ಯಪಾಲಕ ಅಭಿಯಂತರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀಚನಹಳ್ಳಿಯಲ್ಲಿರುವ ಕಬಿನಿ‌ ಜಲಾಶಯದ ಮುಂಭಾಗದಲ್ಲಿ ಈ ಕುರಿತು ಪ್ರತಿಭಟನೆ ನಡೆಸಿದ್ದಾರೆ. ಜಲಾಶಯದ ಪಕ್ಕದಲ್ಲಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ನೀರಾವರಿ ಇಲಾಖೆ ಹಣದಲ್ಲೇ‌ ಖಾಸಗಿ ಕಂಪನಿಗೆ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ. ಮುಖ್ಯ ರಸ್ತೆ ಹದಗೆಟ್ಟಿದ್ದರೂ ಈ ಬಗ್ಗೆ ಅಧಿಕಾರಿಗಳು ತಲೆಕೆಡಿಸಿಕೊಳ್ಳದಿದ್ದು, ಇದೀಗ ಖಾಸಗಿ ಕಂಪನಿಗೆ ರಸ್ತೆ ನಿರ್ಮಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಈ ರಸ್ತೆ ಯಾಕೆ.? ಎಂದು ಪ್ರಶ್ನಿಸಿದ್ದಾರೆ. ಈ ಅಕ್ರಮ ನಡೆಸುತ್ತಿರುವ ಅಧಿಕಾರಿಯನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ. ಪ್ರತಿಭಟನಾಕಾರರು ಅಭಿಯಂತರರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ