ಮೈಸೂರಿನಲ್ಲಿ ವೈರಲ್ ಜ್ಚರದ ಭೀತಿ !

Kannada News

28-06-2017

ಮೈಸೂರು: ಮೈಸೂರಿನಲ್ಲಿ ವೈರಲ್ ಜ್ವರ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದರೂ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಶಾಸಕ ಎಂ.ಕೆ ಸೋಮಶೇಖರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ ಸಭೆಯ ವೇಳೆ ಜಿಲ್ಲಾಧಿಕಾರಿ ಡಿ. ರಂದೀಪ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಶಾಸಕ ಸೋಮಶೇಖರ್ ತೀವ್ರ ತರಾಟೆಗೆ ತೆಗೆದುಕೊಂಡರು. ಬಡ, ಮಧ್ಯಮ ವರ್ಗದ ಜನರು ಹೆಚ್ಚಾಗಿ ವಾಸಿಸುತ್ತಿರುವ ಪ್ರದೇಶಗಳಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದ ಅವರು, ವೈರಲ್ ಜ್ವರ ಹರಡುವ ಬಗ್ಗೆ ಸಾರ್ವಜನಿಕರಿಗೆ ಸರಿಯಾಗಿ ಅರಿವನ್ನೂ ಮೂಡಿಸುತ್ತಿಲ್ಲ ಎಂದು ಹರಿಹಾಯ್ದರು.


ಸಂಬಂಧಿತ ಟ್ಯಾಗ್ಗಳು

ಮೈಸೂರು ವೈರಲ್ ಜ್ಚರದ ಭೀತಿ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ