ಪ್ಯಾನ್ ಕಾರ್ಡ್ ಗೆ ಆಧಾರ್ ಕಡ್ಡಾಯ !

Kannada News

28-06-2017

ನವದೆಹಲಿ: ಮುಂದಿನ ತಿಂಗಳು 1ರಿಂದ ಜಾರಿಗೆ ಬರುವಂತೆ ತೆರಿಗೆ ಪಾವತಿದಾರರ ಪ್ಯಾನ್ ಕಾರ್ಡ್‍ಗಳೊಂದಿಗೆ ಆಧಾರ್ ಸಂಖ್ಯೆಗಳನ್ನು ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ. ಈ ಕುರಿತು ಆದಾಯ ತೆರಿಗೆ ನಿಯಮಗಳಿಗೆ ಮಾಡಲಾದ ತಿದ್ದುಪಡಿಗಳ ಬಗ್ಗೆ ಕೇಂದ್ರ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ. ಪರ್ಮೆನೆಂಟ್ ಅಕೌಂಟ್ ನಂಬರ್(ಪ್ಯಾನ್)ಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ 12 ಅಂಕಿಗಳ ಬಯೋಮೆಟ್ರಿಕ್ ಆಧಾರ್ ಅಥವಾ ನೋಂದಣಿ ಗುರುತು ಪತ್ರ ಕಡ್ಡಾಯ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ