ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಭೀಕರ ಕೊಲೆ !

Kannada News

29-06-2017

ಗದಗ: ಕಲ್ಲಿನಿಂದ ಜಜ್ಜಿ ವ್ಯಕ್ತಿ ಯೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆಯೂ, ಗದಗ್ ನ ಬೆಟಗೇರಿಯ ಶರಣ ಬಸವೇಶ್ವರ ನಗರದಲ್ಲಿ ನಡೆದಿದೆ. ಆನಂದ ಭಜಂತ್ರಿ(೪೨) ಕೊಲೆಯಾದ ದುರ್ದೈವಿ. ತನ್ನ ಸಂಬಂಧಿಕರ ಮನೆಗೆ ಬಂದಿದ್ದಾಗ ಘಟನೆ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಆನಂದ ಭಜಂತ್ರಿ ಜಿಲ್ಲೆಯ ಹರ್ತಿ ಗ್ರಾಮದ ನಿವಾಸಿಯಾಗಿದ್ದು, ರಸ್ತೆ ಪಕ್ಕದಲ್ಲಿರುವ ಅಂಗಡಿಯೊಂದರ ಕಟ್ಟೆ ಮೇಲೆ ಮಲಗಿರುವಾಗ ದುಷ್ಕರ್ಮಿಗಳು ಕೊಲೆ ಗೈದಿದ್ದಾರೆ. ಸ್ಥಳಕ್ಕೆ ಬೆಟಗೇರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆಗಾರರ ಬಂಧನಕ್ಕೆ ಬಲೆ ಬೀಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ