ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ !

Kannada News

29-06-2017 273

ಮೈಸೂರು: ಈ ಬಾರಿಯ ಆಷಾಡ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ, ನಾಳೆ ಚಾಮುಂಡಿ ಬೆಟ್ಟದಲ್ಲಿನ ಚಾಮುಂಡೇಶ್ಚರಿ ದೇವಿಗೆ ವಿಶೇಷ ಪೂಜಾ ಕೈಂಕರ್ಯವನ್ನು ನೆರವೇರಿಸಲು ಸಕಲ ಸಿದ್ಧತೆ ನಡೆಸಿದ್ದಾರೆ. ಇಲ್ಲಿ ವಿಷೇಶ ಪೂಜೆ ಇರುವ ಕಾರಣ ಇಂದು ರಾತ್ರಿ 9 ಗಂಟೆಯಿಂದಲೇ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ. ಖಾಸಗಿ ವಾಹನಗಳಲ್ಲಿ ಬರುವವರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತ ಮಹಲ್ ಹೆಲಿಪ್ಯಾಡ್ ಬಳಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಲಲಿತ ಮಹಲ್ ಹೆಲಿಪ್ಯಾಡ್ ಬಳಿಯಿಂದ ಉಚಿತವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗಿ ಬರವ ವ್ಯವಸ್ಥೆಯನ್ನೂ ಮಾಡಿದ್ದಾರೆ. ನಾಳೆ ಬೆಳಗಿನ ಜಾವ  3 ಗಂಟೆಯಿಂದ ಬಸ್ಸುಗಳು  ಸಂಚಾರ ಆರಂಭಿಸಲಿವೆ. ನಾಳೆ ಚಾಮುಂಡಿ ಬೆಟ್ಟದಲ್ಲಿ ವಿಷೇಶ ಪೂಜಾ ಕೈಂಕರ್ಯಗಳು ನಡೆಯಲಿವೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ