ಗಣಪತಿ ಪೂಜೆಯಲ್ಲಿ ಮಸ್ಲೀಮರು ಭಾಗಿ !

Kannada News

29-06-2017

ಮೈಸೂರು: ಉಡುಪಿ ಪೇಜಾವರ ಮಠಾಧಿಪತಿ ಶ್ರೀ ವಿಶ್ವೇಶ್ವರತೀರ್ಥ ಸ್ವಾಮೀಜಿಯವರಿಂದ, ಶ್ರೀಕೃಷ್ಣ ಮಠದ ಆವರಣದಲ್ಲಿ ಮುಸ್ಲಿಂ ಬಾಂಧವರಿಗೆ ರಂಜಾನ್ ಇಫ್ತಾರ್ ಕೂಟ ಆಯೋಜನೆ ಮಾಡಿದ್ದನ್ನು ಸ್ವಾಗತಿಸಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಬಾಂಧವರಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಮೈಸೂರಿನ ಅಗ್ರಹಾರದಲ್ಲಿರುವ ನವಗ್ರಹ ಗಣಪತಿ ದೇಗುಲದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಭಾಗಿಯಾಗಿದ್ದರು. ಗಣಪತಿ ದೇಗುಲಕ್ಕೆ ಭೇಟಿ ನೀಡುವ ಮೂಲಕ ಹೊಸದೊಂದು ಸಂಪ್ರದಾಯಕ್ಕೆ ಮುಸ್ಲಿಂ ಬಾಂಧವರು ನಾಂದಿ ಹಾಡಿದ್ದಾರೆ. ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಮುಖಂಡರು ಭಾಗಿಯಾಗಿದ್ದರು. ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಮುಸ್ಲಿಂ ಬಾಂಧವರಿಗೆ ರಂಜಾನ್ ಇಫ್ತಾರ್ ಕೂಟ ಆಯೋಜನೆ ಮಾಡಿದ್ದ ಪೇಜಾವರ ಶ್ರೀಗಳ ನಡೆಗೆ ಮುಸ್ಲಿಂ ಬಾಂಧವರು ಮೆಚ್ಚುಗೆ ವ್ಯಕ್ತಪಡಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ