ಕಾರು ಅಡ್ಡಾದಿಡ್ಡಿ ಚಲಿಸಿ ಅಪಘಾತ !

Kannada News

29-06-2017

ಬೆಂಗಳೂರು: ಎರಡು ಪ್ರತ್ಯೇಕ ಅಪಘಾತಗಳಲ್ಲಿ ನಗರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ವಿವಿ ಪುರಂನ ಲಾಲ್‍ಬಾಗ್ ರಸ್ತೆಯಲ್ಲಿ ಅಡ್ಡಾದಿಡ್ಡಿ ಚಲಿಸಿದ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟರೆ. ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ದರೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಲಾಲ್‍ಬಾಗ್ ರಸ್ತೆಯಲ್ಲಿ ವೇಗವಾಗಿ ಬಂದ ಆಡಿ ಕಾರು ಡಿಕ್ಕಿ ಹೊಡೆದು ಸಂಪಂಗಿರಾಮನಗರದ ರಾಮಣ್ಣ (65) ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ರಾಮಣ್ಣ, ರಾತ್ರಿ ರಸ್ತೆ ದಾಟುವಾಗ ಅಡ್ಡಾದಿಡ್ಡಿಯಾಗಿ ಬಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಪ್ರಕರಣ ದಾಖಲಿಸಿರುವ ವಿವಿ ಪುರಂ ಸಂಚಾರ ಪೊಲೀಸರು ಆಡಿ ಕಾರನ್ನು ಪತ್ತೆ ಹಚ್ಚಿದ್ದು, ಚಾಲಕನಿಗಾಗಿ ತೀವ್ರ ಶೋಧ ನಡೆಸಿದ್ದಾರೆ, ಎಂದು ಡಿಸಿಪಿ ಶೋಭಾರಾಣಿ ತಿಳಿಸಿದ್ದಾರೆ. ಇನ್ನೊಂದೆಡೆ ಪೀಣ್ಯದ, ಕೈಗಾರಿಕಾ ಪ್ರದೇಶದ 14ನೇ ಕ್ರಾಸ್‍ನಲ್ಲಿ ಪತ್ನಿಯೊಂದಿಗೆ ರಸ್ತೆ ದಾಟುತ್ತಿದ್ದ ಗಿರಿಯಪ್ಪ (75) ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಮಾಗಡಿ ರಸ್ತೆಯ ಗಿರಿಯಪ್ಪ ಅವರು ಕಳೆದ 27ರ ಬೆಳಿಗ್ಗೆ 8.45ರ ವೇಳೆ ಪತ್ನಿಯ ಜೊತೆ ಸಂಬಂಧಿಕರ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಅವರ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೀಣ್ಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ