ವ್ಯಕ್ತಿ ಅನುಮಾನಾಸ್ಪದ ಸಾವು !

Kannada News

29-06-2017

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಹಿನ್ನೀರಿನಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ. ಎಚ್.ಡಿ. ಕೋಟೆ ತಾಲ್ಲೂಕಿನ ರಾಮೇನಹಳ್ಳಿ ಗ್ರಾಮದ ಕಾರ್ತಿಕ್ (25) ಮೃತ ವ್ಯಕ್ತಿ. ಕಳೆದ 3 ದಿನಗಳಿಂದ ನಾಪತ್ತೆಯಾಗಿದ್ದ ಕಾರ್ತಿಕ್. ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಈತನ ಸಾವಿಗೆ ನಿಖರವಾದ ಕಾರಣ ತಿಳಿದಿಲ್ಲ. ಸ್ಥಳಕ್ಕೆ ಧಾವಿಸಿದ ಪೊಲೀಸರು, ಶ್ವಾನ ದಳದವರು ಪರಿಶೀಲನೆ ನಡೆಸಿದ್ದಾರೆ. ಈತನ ಸಾವಿನ ಕುರಿತು ಅನುಮಾನದ ವ್ಯಕ್ತಪಡಿಸಿದ ಪೊಲೀಸರು, ಬೀಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ