ಚಾಮುಂಡೇಶ್ವರಿಯನ್ನು ನೋಡಲು ಮುಗಿಬಿದ್ದ ಜನ !

Kannada News

30-06-2017 218

ಮೈಸೂರು: ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ಸಂಭ್ರಮದ ವಾತಾರಣ ಕಂಡುಬಂದಿತ್ತು. ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಪ್ರಯುಕ್ತ ವಿಶೇಷ ಪೂಜೆ ನಡೆಯುತ್ತಿದೆ. ಪೂಜೆಗಾಗಿ ಬೆಟ್ಟಕ್ಕೆ ಸಾವಿರಾರು ಭಕ್ತಾಧಿಗಳು ಆಗಮಿಸುತ್ತಿದ್ದಾರೆ. ಇಂದು ಬೆಳಗಿನ ಜಾವದಿಂದಲೇ ಆರಂಭವಾದ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು. ಅಭಿಷೇಕದೊಂದಿಗೆ ಚಾಮುಂಡಿಗೆ ಮಹಾಮಂಗಳಾರತಿ ಪೂಜೆ ನೆರವೇರಿಸಲಾಯಿತು. ಶ್ವೇತವರ್ಣದ ಸೀರೆಯೊಂದಿಗೆ ಅಲಂಕೃತ ಮತ್ತು ಸರ್ವಾಭರಣಾಲಂಕೃತ ಚಾಮುಂಡಿಯ ದರ್ಶನಕ್ಕೆ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇಡೀ ದೇವಾಲಯ  ವಿವಿಧ ಬಗೆಯ ಹೂವುಗಳಿಂದ ಅಲಂಕಾರಗೊಂಡಿದೆ. ಭಕ್ತರ ದರ್ಶನಕ್ಕಾಗಿ ಬ್ಯಾರಿಕೇಡ್ ವ್ಯವಸ್ಥೆಯನ್ನು ಪೊಲೀಸರು ಮಾಡಿದ್ದಾರೆ. ಹಾಗೂ ಭದ್ರತೆಗಾಗಿ 300ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ