ರಾಜ್ಯದಲ್ಲಿ ಒಂದನೇ ತರಗತಿಯಿಂದಲೇ ಇಂಗ್ಲೀಷ್ !

Kannada News

30-06-2017 348

ಬೆಂಗಳೂರು: ರಾಜ್ಯದ ಸರಕಾರಿ ಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಒಂದನೇ ತರಗತಿ ಯಿಂದ ಇಂಗ್ಲಿಷ್‌ ಕಲಿಕೆ ಆರಂಭವಾಗಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್‌ ಸೇಠ್ ಹೇಳಿದ್ದಾರೆ. ರಾಜ್ಯದಲ್ಲಿ 1998ರಿಂದಲೂ ಒಂದನೇ ತರಗತಿಯಿಂದ ಇಂಗ್ಲಿಷ್‌ ಕಲಿಕೆ ಬಗ್ಗೆ ಪ್ರಸ್ತಾವ ಆಗುತ್ತಲೇ ಇತ್ತು. ಹೀಗಾಗಿ, 5,400 ಶಿಕ್ಷಕರಿಗೆ ಆಂಗ್ಲ ಭಾಷೆಯ ತರಬೇತಿ ನೀಡಿ ಈ ವರ್ಷದಿಂದಲೇ ಒಂದನೇ ತರಗತಿ ಮಕ್ಕಳಿಗೆ ಇಂಗ್ಲಿಷ್‌ ಕಲಿಕೆ ಆರಂಭಿಸುತ್ತಿದ್ದೇವೆ ಎಂದರು. RTI ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ನಿಷೇಧ ಮಾಡಿರುವ ಕೆಲವು ಪ್ರಕರಣಗಳು ಗಮನಕ್ಕೆ ಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಇನ್ನು ಜಿಎಸ್‌ಟಿ ಬಗ್ಗೆ ಮಾತನಾಡಿದ ಅವರು,  ಜಿಎಸ್‌ಟಿ ಜಾರಿಯಿಂದ ಸರಕಾರಿ ಶಿಕ್ಷಣ ಸಂಸ್ಥೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪಠ್ಯ ಪುಸ್ತಕದ ಮೇಲೆಯೂ ಯಾವುದೇ ಪರಿಣಾಮ ಬೀರುವುದಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಹಾಗೂ ಸರ್ಕಾರದ ಖಜಾನೆ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದರು. ಹಿಂದೆ ವ್ಯಾಟ್‌ ಜಾರಿಗೆ ಬಂದಾಗಲೂ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈಗಲೂ ಸ್ವಲ್ಪಮಟ್ಟಿನ ವಿರೋಧ ವ್ಯಕ್ತವಾಗುತ್ತಿದೆ. ಆದರೆ ದೇಶದ ಅಭಿವೃದ್ಧಿ ದೃಷ್ಟಿಯಿಂದ ಜಿಎಸ್‌ಟಿ ಜಾರಿಗೊಳಿಸುವುದು ಒಳ್ಳೆಯದು ಎಂದರು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ