ಕಾರು ಪಲ್ಟಿ ಓರ್ವ ಸಾವು !

Kannada News

01-07-2017

ತುಮಕೂರು: ಸ್ವಿಫ್ಟ್ ಕಾರು ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದೂ. ಮೂವರಿಗೆ ಗಂಭೀರ ಗಾಯಗಳಾಗಿವೆ. ದೇವರಾಜು 35 ಮೃತ ದುರ್ದೈವಿ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ದಬ್ಬೆಘಟ್ಟ ಬಳಿ ಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ದೇವರಾಜು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನಲ್ಲಿ ಜೆಡಿಎಸ್ ಅಧ್ಯಕ್ಷರಾಗಿದ್ದರು. ದಾವಣಗೆರೆಯಲ್ಲಿ ನಡೆಯಲಿರುವ ಜೆಡಿಎಸ್ ನ ಸಮಾವೇಶಕ್ಕೆಂದು ತೆರಳುತ್ತಿದ್ದಾಗ ಕಾರ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ