ತಮಿಳುನಾಡಿಗೆ ನೀರು ಬಿಡಬೇಡಿ !

Kannada News

01-07-2017

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಹಿನ್ನೆಲೆಯಲ್ಲಿ ಇಂದೂ ಕೂಡ ಮಂಡ್ಯದ ಪಾಂಡವಪುರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸರ್ಕಾರ ಕ್ರಮ ಖಂಡಿಸಿ ಹೆದ್ದಾರಿ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಬೇಕೆಂದು ಆಗ್ರಹಿಸಿದರು. ಈ ಕುರಿತು ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲದೇ, ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ಕಲಾಪ ಬಹಿಷ್ಕರಿಸಿದ ವಕೀರು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು, ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಕಿಡಿಕಾರಿದ್ದಾರೆ. ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಬೇಕೆಂದು ವಕೀಲರು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿಯೂ ಕಬಿನಿ ಜಲಾಶಯದಿಂದ ಕಪಿಲಾ ನದಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ಮುಂದುವರೆದಿದೆ. ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಬಳಿ ಸಿಂಹಘರ್ಜನೆ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಿನ್ನೆಯಿಂದಲೇ ಕಬಿನಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್ಸ್ ನೀರು ಹೊರಬಿಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.                       



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ