ದೇವೇಗೌಡರನ್ನು ಭೇಟಿ ಮಾಡಿದ ಮೀರಾ ಕುಮಾರ್ !

Kannada News

01-07-2017

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಹಿನ್ನೆಲೆ, ಯುಪಿಎ ನ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ ಮೀರಾಕುಮಾರ್ ಅವರನ್ನು ಸ್ವಾಗತಿಸಿ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹಾಗೂ ಸಚಿವ ಆಂಜನೇಯ ಬರಮಾಡಿಕೊಂಡರು, ನಂತರ ವಿಮಾನ ನಿಲ್ದಾಣದ ವಿಐಪಿ ಲಾಂಜ್ ನಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿ ಮಾಡಿ ಚರ್ಚೆ ನಡೆಸಿದರು. ಚರ್ಚೆಯನಂತರ  ಬೆಂಗಳೂರಿನ ಕೆಪಿಸಿಸಿ ಕಛೇರಿಗೆ ಭೇಟಿ ನೀಡಿದ್ಧಾರೆ. ಚುನಾವಣೆಯ ನಿಮಿತ್ತ ರಾಜ್ಯದಲ್ಲಿ ಜೆಡಿಎಸ್ ಮತ್ತು ಇತರ ಪಕ್ಷಗಳ ಮತಯಾಚಿಸಲು ಆಗಮಿಸಿದ್ದೂ, ಇಂದು ಹಲವು ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.         ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ