ಕರೆಂಟ್ ಶಾಕ್ ಗೆ ವ್ಯಕ್ತಿ ಬಲಿ !

Kannada News

01-07-2017

ಮೈಸೂರು: ಎಲೆಕ್ಟ್ರಿಕ್ ಕೆಲಸ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ವಿಜಯನಗರದ ಕೆ.ಡಿ.ಸರ್ಕಲ್ ಬಳಿ ಘಟನೆ ಸಂಭವಿದ್ದೂ, ಸಲ್ಮಾನ್ (೩೭) ಮೃತ ದುರ್ದೈವಿ. ಸಲ್ಮಾನ್ ಮೈಸೂರಿನ ಕೆ.ಆರ್.ಮೊಹಲ್ಲಾದ ನಿವಾಸಿಯಾಗಿದ್ದಾರೆ. ಕಟ್ಟಡದ ಎಲೆಕ್ಟ್ರಿಕ್ ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದೂ ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ