ಕೆ.ಆರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಧಿಡೀರ್ ಭೇಟಿ !

Kannada News

01-07-2017

ಮೈಸೂರು: ಮೈಸೂರಿನಲ್ಲಿ ಡೆಂಗ್ಯೂ ಮಹಾಮಾರಿ ತಾಂಡವಾವಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಅವರಿಂದು ಕೆ.ಆರ್.ಆಸ್ಪತ್ರೆ ಹಾಗೂ ಮಕ್ಕಳ ಆಸ್ಪತ್ರೆಯಾದ ಚೆಲುವಾಂಬ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅಲ್ಲಿನ ವೈದ್ಯರಿಂದ ಡೆಂಗ್ಯೂ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ರೋಗಿಗಳ ಸಂಪೂರ್ಣ ವಿವರ ಪಡೆದರು. ಡೆಂಗ್ಯೂ ಜ್ವರ ಎಂದು ಎಷ್ಟು ಮಂದಿ ದಾಖಲಾಗಿದ್ದಾರೆ. ವೈರಲ್ ಜ್ವರದಿಂದ ದಾಖಲಾದವರು ಎಷ್ಟು ಮಂದಿ ಎಂಬ ಮಾಹಿತಿಯನ್ನು ಕಲೆ ಹಾಕಿದರು. ಈ ಕುರಿತು ವಿವರಣೆ ನೀಡಿದ ವೈದ್ಯರು 7 ರಿಂದ 8ವರ್ಷದ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬಿಳಿಯ ರಕ್ತ ಕಣಗಳು ಕಡಿಮೆಯಾಗಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರಲ್ಲರಲ್ಲದೇ, ಆಸ್ಪತ್ರೆಗೆ ದಾಖಲಾಗಿರುವ ಎಲ್ಲರೂ ಮೈಸೂರಿನವರೇ ಅಲ್ಲದೇ, ಹುಣಸೂರು, ಕೆ.ಆರ್.ಪೇಟೆ, ಮಂಡ್ಯ, ಹೀಗೆ ಬೇರೆ ಬೇರೆ ಕಡೆಗಳಿಂದ ಬಂದ ರೋಗಿಗಳೂ ಇಲ್ಲಿದ್ದಾರೆ. ಆದರೆ ಮೈಸೂರಿನಲ್ಲಿ ಕೆಲವರು ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿರುವುದರಿಂದ ಮೈಸೂರಿನಲ್ಲಿ ಡೆಂಗ್ಯೂ ಬಂದಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಎಲ್ಲ ಕಡೆಯೂ ಹೆಚ್ಚಿನ ಮುತುವರ್ಜಿ ವಹಿಸಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು. ಆಸ್ಪತ್ರೆಯಲ್ಲಿ ಹಾಸಿಗೆ ಸಾಲುತ್ತಿಲ್ಲ ಎಂದು ಹೇಳಲಾಗುತ್ತಿದ್ದು, ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಎಂದು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿಕೊಡಲಾಯಿತು. ಇದೇ ವೇಳೆ ಜಿಲ್ಲಾಧಿಕಾರಿ  ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭ ವೈದ್ಯರುಗಳಾದ ಚಂದ್ರಶೇಖರ್, ಕೃಷ್ಣಮೂರ್ತಿ, ರವಿಶಂಕರ್, ಸವಿತಾ, ಭಾಗೀರಥಿ, ಅನುರಾಧ ಉಪಸ್ಥಿತರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ