ಮಂಡ್ಯ-ಮೈಸೂರಿನಲ್ಲಿ ನಿಲ್ಲದ ಪ್ರತಿಭಟನೆ !

Kannada News

03-07-2017

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಹಿನ್ನೆಲೆಯಲ್ಲಿ ಇಂದೂ ಕೂಡ ಮಂಡ್ಯದಲ್ಲಿ ಪ್ರತಿಭಟನೆ ಮುಂದುವರೆದಿದೆ. ನಾಲ್ಕನೇ ದಿನವಾದ ಇಂದು ಮಂಡ್ಯದ, ಪಾಂಡವಪುರದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿದೆ. ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಕರವೇ ಸಂಘಟನೆಯಿಂದ ಜಿಲ್ಲೆಯ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕರವೇ ಕಾರ್ಯಕರ್ತರು, ಜಿಲ್ಲೆಯ ಶ್ರೀರಂಗಪಟ್ಟಣ-ಬೀದರ್ ಹೆದ್ದಾರಿ ಸಂಚಾರ ತಡೆದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಮತ್ತು  ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ವಕೀಲರು, ರಾಜ್ಯ ಸರ್ಕಾರದ ಕ್ರಮ‌ ಖಂಡಿಸಿ ಕಲಾಪ ಬಹಿಷ್ಕರಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರದ ತೀರ್ಮಾನಕ್ಕೆ ವಕೀಲರ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಮೈಸೂರಿನಲ್ಲಿಯೂ ಪ್ರತಿಭಟನೆ ಮುಂದುವರಿದಿದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲಮನ್ನಾ ಮಾಡಬೇಕು ಮತ್ತು ಜಲಾಶಯಗಳು ಭರ್ತಿಯಾಗುವುದಕ್ಕೂ ಮೊದಲೇ ಕೆ.ಆರ್.ಎಸ್ ಹಾಗೂ ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ರಾಜ್ಯ ರೈತಸಂಘದಿಂದ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನೂರಾರು ರೈತರು ಪ್ರತಿಭಟನೆ ನಡಿಸಿದ್ದಾರೆ. ಜಲಾಶಯಗಳ ಭರ್ತಿಗೂ ಮೊದಲೇ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಈ ಕೂಡಲೇ ನೀರು ನಿಲ್ಲಿಸುವಂತೆ ಜಿಲ್ಲಾಡಳಿತ ಮತ್ತು ಸರ್ಕಾರವನ್ನು ಒತ್ತಾಯಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ