ಮಾನಸಿಕ ಖಿನ್ನತೆ ವ್ಯಕ್ತಿ ಆತ್ಮ ಹತ್ಯೆ !

Kannada News

03-07-2017

ಕಾರವಾರ: ಮಾನಸಿಕ ಖಿನ್ನತೆಯಿಂದ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೂ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ, ದೇಸಾಯಿ ಗಲ್ಲಿಯ ,ಸುಭಾಷ್ ಇಟಗಿ ೨೮ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಳೆದ ವರ್ಷ ವಿವಾಹವಾಗಿದ್ದ ಸುಭಾಷ್ ಮಾನಸಿಕ ಖಿನ್ನತೆಯಿಂದ ಬಳಲುತಿದ್ದರು ಎಂದು ತಿಳಿದು ಬಂದಿದೆ. ಇದರಿಂದ ಹೊರಬರಲಾರದೇ ನಿನ್ನೆ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ