ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ !

Kannada News

03-07-2017

ಚಿಕ್ಕಬಳ್ಳಾಪುರ: ಗರ್ಭಿಣಿಯೊಬ್ಬರು ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಆಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಬಿಳ್ಳೂರುವಿನಲ್ಲಿ ನಡೆದಿದೆ. ಬಾಗೇಪಲ್ಲಿ ತಾಲ್ಲೂಕಿನ ಕೊಂಡಂವಾರಪಲ್ಲಿ ಗ್ರಾಮದ ವೆಂಕಟರೆಡ್ಡಿ ಎಂಬುವವರ, ಪತ್ನಿ ಲಕ್ಷ್ಮೀದೇವಮ್ಮ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ. ಲಕ್ಷ್ಮೀದೇವಮ್ಮಗೆ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ೧೦೮ ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆ ನಂತರ ಬಂದ ಆಂಬುಲೆನ್ಸ್ ನಲ್ಲಿ ಹೆರಿಗೆ ನೋವು ಅನುಭವಿಸುತ್ತಿದ್ದ ಲಕ್ಷ್ಮೀದೇವಮ್ಮ ಅವರನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆ ಕಡೆಗೆ ಕರೆದೊಯ್ಯಲಾಗಿದೆ. ಅದಾಗಲೇ ಹೆರಿಗೆ ನೋವಿನಿಂದ ಬಳಲುತ್ತಿದ್ದ ಲಕ್ಷ್ಮೀದೇವಮ್ಮ ಬೆಳಗ್ಗೆ ೩.೪೫ ಕ್ಕೆ ಬಿಳ್ಳೂರು ಗ್ರಾಮದ ಬಳಿ ಮಾರ್ಗದ ನಡುವೆಯೇ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ