ಜಿ.ಎಸ್‍.ಟಿ ವಿರುದ್ಧ ತಿರುಗಿಬಿದ್ದ ಮಹಿಳೆಯರು !

Kannada News

03-07-2017

ಬೆಂಗಳೂರು: ಸ್ಯಾನಿಟರಿ ನ್ಯಾಪ್‍ಕಿನ್ ಮೇಲೆ ಶೇ 12% ಜಿಎಸ್‍ಟಿ ತೆರಿಗೆ ಹೇರಿರುವ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಮಹಿಳೆಯರು ತಿರುಗಿಬಿದ್ದಿದ್ದಾರೆ. ಜಿ.ಎಸ್‍.ಟಿ ವಿಚಾರದಲ್ಲಿ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರುವಾಗಿದೆ. ಜಿ.ಎಸ್‍.ಟಿ ಅಡಿ ಕುಂಕುಮ ಹಾಗೂ ಬಳೆಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದ್ದು, ಚಿನ್ನಕ್ಕೆ ಶೇ.3ರಷ್ಟು ತೆರಿಗೆ ಇದೆ. ಆದರೆ ಸ್ಯಾನಿಟರಿ ನ್ಯಾಪ್‍ಕಿನ್ಸ್ ಗೆ 12% ತೆರಿಗೆ ಇದೆ. ಹೀಗಾಗಿ `ಡೋಂಟ್ ಟ್ಯಾಕ್ಸ್ ಆನ್ ಮೈ ಪೀರಿಯಡ್' ಹೆಸರಿನಲ್ಲಿ ಅಭಿಯಾನ ಶುರುವಾಗಿದೆ. ಸ್ಯಾನಿಟರಿ ನ್ಯಾಪ್‍ಕಿನ್ಸ್ ಮೇಲೆ 12% ಜಿ.ಎಸ್‍.ಟಿ ಗೆ ಪ್ರಸೂತಿ ತಜ್ಞೆ ಪದ್ಮಿನಿ ಪ್ರಸಾದ್ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಲೂ ನಮ್ಮ ಹಳ್ಳಿಗಳಲ್ಲಿ ಸಾಕಷ್ಟು ಹೆಣ್ಣುಮಕ್ಕಳು ನ್ಯಾಪ್‍ಕಿನ್ ಕೊಳ್ಳದ ಪರಿಸ್ಥಿತಿಯಲ್ಲಿ ಇದ್ದಾರೆ. ಈಗಲೂ ಬಟ್ಟೆಗಳನ್ನು ಬಳಸುತ್ತಾರೆ. ಇದರಿಂದ ಮಹಿಳೆಯರಿಗೆ ಹಲವಾರು ರೋಗಗಳು ಕಾಣಿಸಿಕೊಳ್ಳುತ್ತವೆ ಎಂದಿದ್ದಾರೆ. ಹೆಣ್ಣುಮಕ್ಕಳು ಇದರ ಬಗ್ಗೆ ಮಾತಾಡೋದೆ ಕಡಿಮೆ. ಹೀಗಿರುವಾಗ 12% ಜಿ.ಎಸ್‍.ಟಿ ಹಾಕಿರೋದು ಸರಿಯಲ್ಲ. ಟ್ಯಾಕ್ಸ್ ಫ್ರೀ ನ್ಯಾಪ್‍ಕಿನ್ ಮಾಡಬೇಕು ಅಂತ ನಡೆಯುತ್ತಿರುವ ಹೋರಾಟವನ್ನು ನಾನು ಬೆಂಬಲಿಸುತ್ತೇನೆ ಎಂದಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ