ಮಾಜಿ ಶಾಸಕನಿಗೆ ನ್ಯಾಯಾಂಗ ಬಂಧನ !

Kannada News

03-07-2017

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಶಿವರಾಜ ಸಜ್ಜನಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಾವೇರಿ ಸಿಜೆಎಂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. 2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತಿ ಉಲ್ಲಂಘಿಸಿದ್ದ ಆರೋಪ ಮೇರೆಗೆ ನ್ಯಾಯಾಂಗದ ಬಂಧನ ವಿಧಿಸಲಾಗಿದೆ. ಹಾವೇರಿ ವಿಧಾನಸಭಾ ಕ್ಷೇತ್ರದ ಕೆಜೆಪಿ ಅಭ್ಯರ್ಥಿಯಾಗಿದ್ದ ನೆಹರು ಓಲೇಕಾರ ಪರ ಉಪಹಾರ ಆಯೋಜಿಸಿದ್ದ ಆರೋಪ ಎದುರಿಸುತ್ತಿದ್ದೂ, ನೀತಿ ಸಂಹಿತೆ ಉಲ್ಲಂಘಿಸಿ ಸ್ವಸಹಾಯ ಸಂಘದ ಸದಸ್ಯರಿಗೆ ತಮ್ಮ ಮನೆ ಮುಂದೆ ಉಪಹಾರದ ವ್ಯವಸ್ಥೆ ಮಾಡಿದ್ದರು, ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದೂ, ಈ ಕುರಿತು ಪ್ರಕರಣವೂ ದಾಖಲಾಗಿತ್ತೂ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 2017ರಲ್ಲಿ  ನ್ಯಾಯಾಲಯಕ್ಕೆ ಹಾಜರಾಗದಿದ್ದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದ ನ್ಯಾಯಾಲಯ. ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದ ವೇಳೆ ನ್ಯಾಯಾಂಗ ಬಂಧನವನ್ನು ಪ್ರಕಟಿಸಿದೆ. ಶಿವರಾಜ ಸಜ್ಜನ ಬಿಜೆಪಿಯ ಹಾಲಿ ಜಿಲ್ಲಾಧ್ಯಕ್ಷರಾಗಿದ್ದೂ, ಇದೀಗ ಜಿಲ್ಲಾ ಕಾರಾಗೃಹದಲ್ಲಿದ್ದಾರೆ. ಜಾಮೀನಿಗಾಗಿ ತಾಲೀಮು ನಡೆಸಿರುವ ಶಿವರಾಜ ಸಜ್ಜನ ಬೆಂಬಲಿಗರು ಮತ್ತು ಬಿಜೆಪಿ ಮುಖಂಡರು ಜಿಲ್ಲಾ ಕಾರಾಗೃಹದ ಮುಂದೆ ಬೀಡು ಬಿಟ್ಟಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ