ಮನೆ ಬೀಗ ಮುರಿದು ಕಳ್ಳತನ !

Kannada News

04-07-2017

ಹುಬ್ಬಳ್ಳಿ: ಮನೆ ಬೀಗ ಮುರಿದು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಅಧ್ಯಾಪಕ ನಗರದಲ್ಲಿ ವಾಸವಿರು ವೀಣಾ ಗುರುರಾಜ ಜೋಶಿ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯಲ್ಲಿದ್ದ 100 ಗ್ರಾಂ ಚಿನ್ನಾಭರಣ ಹಾಗೂ ನಗದನ್ನು ಕದ್ದೊಯ್ದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಳ್ಳರು ಮನೆ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಜಿಲ್ಲೆಯ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ತನಿಖೆ ಕೈಗೊಂಡಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ