ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ !

Kannada News

04-07-2017

ಬೆಂಗಳೂರು: ಮನೆಯೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಶ್ರೀರಾಂಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ, ನಾರಾಯಣ, ಆಕಾಶ್ ಬಂಧಿತ ಆರೋಪಿಗಳು, ಬಂಧಿತರಿಂದ ೧೬ ಕೆ.ಜಿ ಗಾಂಜಾ ವಶ ಪಡಿಸಿಕೊಂಡಿದ್ದಾರೆ. ನಗರದ ಪಿಎಫ್ ಜಂಕ್ಷನ್ ಬಳಿ ಮನೆಯೊಂದರಲ್ಲಿ, ಶೇಖರಿಸಿಟ್ಟ ಗಾಂಜಾ ಮಾರಾಟ ಮಾಡುತ್ತಿದ್ದ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.ಬಂಧಿತ ನಾರಾಯಣ ಹಲವು ಮನೆಗಳ್ಳತ ನಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿಯೂ ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ