ಖಾನಾವಳಿ ಬಳಿ ವ್ಯಕ್ತಿ ಶವ ಪತ್ತೆ !

Kannada News

04-07-2017

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗದ, ಮುಗಳಖೋಡದಲ್ಲಿನ ಸಾವಜಿ ಖಾನಾವಳಿ ಬಳಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ನಿನ್ನೆ ರಾತ್ರಿ ಕಂಠ ಪೂರ್ತಿ ಕುಡಿದು, ಮುಗಳಖೋಡದ ಖಾನಾವಳಿ ಮುಂದೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಶಂಕೆ ವ್ಯಕ್ತವಾಗಿದ್ದೂ, ಈ ಕುರಿತು ಹಾರೂಗೇರಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪರಶೀಲನೆಯ ನಂತರ ಮೃತ ವ್ಯಕ್ತಿ, ರಾಯಬಾಗ ತಾಲ್ಲೂಕಿನ ಚಿಂಚಲಿ ಪಟ್ಟಣದ ಸದಾಶಿವ ಕಲಪ್ಪ ನಾಯ್ಕ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಹಾರೂಗೇರಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ