ವಿದ್ಯುತ್ ಪ್ರವಹಿಸಿ ರೈತ ಸಾವು !

Kannada News

04-07-2017

ಬೆಳಗಾವಿ: ನೀರಿನ ಪಂಪ್ ಸೆಟ್ ಚಾಲು ಹೋಗಿದ್ದ ರೈತ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ, ಬೆಳಗಾವಿಯ ಅಥಣಿ ತಾಲ್ಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ. ನಾಮದೇವ ಯಶವಂತ ಸಾಳುಂಕೆ(೫೮) ಮೃತ ರೈತ. ಇಂದು ಬೆಳಿಗ್ಗೆ ಹೊಲಕ್ಕೆ ನೀರು ಹಾಯಿಸಲು ಪಂಪ್ ಸೆಟ್ ಬಳಿ ತೆರಳಿದ್ದು, ಪಂಪ್ ಸೆಟ್ ಚಾಲು ಮಾಡುವಾಗ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ಸಂಭವಿಸಿದೆ. ಮೃತ ರೈತನಿಂದ ಕುಟುಂಬಕ್ಕೆ ತೀವ್ರ ಆಘಾತವಾಗಿದ್ದೂ, ಕುಟುಂಬಕ್ಕೆ ಆಧಾರವಾಗಿದ್ದ ರೈತನ ಸಾವಿನಿಂದ ಕುಟುಂಬಸ್ಥರಿಗೆ ದಿಕ್ಕು ತೋಚದಂತಾಗಿದೆ. ಸದ್ಯ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ