ಸಿಎಂ ಹೇಳಿಕೆಗೆ ಪ್ರತಾಪ್ ಸಿಂಹ ಆಕ್ಷೇಪ !

Kannada News

04-07-2017

ಮೈಸೂರು: ಕೆ.ಆರ್.ಎಸ್ ಮತ್ತು ಕಬಿನಿ ಜಲಾಶಯಗಳು ಭರ್ತಿಯಾಗುವುದಕ್ಕೂ ಮೊದಲೇ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಿಲುವಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ, ನ್ಯಾಯಾಲಯದ ಆದೇಶ ಪಾಲನೆಗಾಗಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗಿದೆ ಎಂಬ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಈ ಬಾರಿಯೂ ಸಮರ್ಪಕವಾಗಿ ಮಳೆಯಾಗಿಲ್ಲದ ಕಾರಣ ಜಲಾಶಯಗಳು ಬರಿದಾಗಿವೆ, ಕೆರೆಕಟ್ಟೆಗಳು ಒಣಗಿಹೋಗಿವೆ, ಪರಿಸ್ಥಿತಿ ಹೀಗಿರುವಾಗ ತಮಿಳು ನಾಡಿಗೆ ನೀರು ಬಿಡುವುದು ಎಷ್ಟು ಸರಿ ಎಂದಿದ್ದಾರೆ. ತಮಿಳು ನಾಡಿಗೆ ನೀರು ಬಿಡುವ ಮುನ್ನಾ,ಇಲ್ಲಿನ ವಾಸ್ತವ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕಿತ್ತು, ಎಂದು ರಾಜ್ಯ ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ