ಪ್ರಮೋದ್ ಮುತಾಲಿಕ್ ವಿರುದ್ಧ ಎಫ್.ಐ.ಆರ್ !

Kannada News

04-07-2017

ಬೆಂಗಳೂರು: ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ, ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ದ ಎಫ್.ಐ.ಆರ್ ದಾಖಲಾಗಿದೆ. ಹೈಗ್ರೌಂಡ್ಸ್ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆದ ಇಪ್ತಾರ್ ಕೂಟ ವಿರೋಧಿಸಿ ಕಳೆದ ಭಾನವಾರ ಮೌರ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಲಾಗಿತ್ತು, ಈ ವೇಳೆ ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ರಕ್ತ ಚೆಲ್ಲಿಯಾದ್ರು ಚಿಂತೆಯಿಲ್ಲ, ಇನ್ನು ಮುಂದೆ ದೇವಸ್ಥಾನದಲ್ಲಿ ಇಫ್ತಾರ್ ಕೂಟ ನಡೆಸಲು ಬಿಡುದಿಲ್ಲ ಎಂದಿದ್ದರು, ಈ ಕುರಿತು ಪ್ರತಿಭಟನಾಕಾರರಲ್ಲಿ ಪ್ರಚೋದನ ಕಾರಿ ಮನೋಭಾವ ಬಿತ್ತಿದ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ