ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದವರ ಬಂಧನ !

Kannada News

04-07-2017

ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರ ಬಂಧಿಸಿದ್ದಾರೆ. ದಂಧೆ ನಡೆಸುತ್ತಿದ್ದ ಆರೋಪಿಗಳಾದ ವಸಂತಬಾಯಿ, ವೀರೇಶ್, ಸತೀಶ್, ಕರುಣಾಜನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಗರಬಾವಿಯ ಬಿಡಿಎ ಲೇಔಟ್ ನಲ್ಲಿ ಯುವತಿಯರನ್ನಿಟ್ಟುಕೊಂಡು ಮಾಂಸ ದಂಧೆ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿಯಿಟ್ಟಿದ್ದ ಪೊಲೀಸರು ಈ ದಂಧೆಯಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಹತ್ತು ಸಾವಿರ ನಗದು, ಮೂರು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.  

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ