ಕಳ್ಳತನಕ್ಕೆ ಬಂದ ದುಷ್ಕರ್ಮಿಗಳು ಹೊಯ್ಸಳ ವಾಹನದ ಸೈರನ್ ಶಬ್ದ ಕೇಳುತ್ತಿದ್ದಂತೆ ಪರಾರಿ

Kannada News

05-07-2017

ಬೆಂಗಳೂರು,ಜು.4-ಕೆ.ಆರ್‍ಪುರಂನ ಟಿಸಿಪಾಳ್ಯದ ಬಳಿ ಕಳೆದ ಶನಿವಾರ ಮಧ್ಯರಾತ್ರಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಳ್ಳತನ ಮಾಡಲು ಬಂದ ದುಷ್ಕರ್ಮಿಗಳು ಪೊಲೀಸ್ ವಾಹನದ ಸೈರನ್ ಶಬ್ದ ಕೇಳಿ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಟಿಸಿ ಪಾಳ್ಯದ ಬಳಿ ಕಳೆದ ಜು.1ರ ಮಧ್ಯರಾತ್ರಿ 2ರ ವೇಳೆ ನಾಲ್ಕೈದು ಮಂದಿ ದುಷ್ಕರ್ಮಿಗಳು ಮುಖ ಮುಚ್ಚಿಕೊಂಡು ಓಡಾಡುತ್ತಿದ್ದನ್ನು ಗಮನಿಸಿದ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕಾಗಮಿಸಿದ ಕೆ.ಆರ್.ಪುರಂ ಪೊಲೀಸರ ಹೊಯ್ಸಳ ವಾಹನದ ಸೈರನ್ ಶಬ್ದ ಕೇಳುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಇತ್ತೀಚೆಗೆ ಕೆಆರ್‍ಪುರಂ ಭಾಗದಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬಾಲಚಂದ್ರ ಎಂಬುವರು ತಮ್ಮ ಮನೆಗೆ ಸಿಸಿಟಿವಿ ಅಳವಡಿಸಿದ್ದು ಅದರಲ್ಲಿ ದುಷ್ಕರ್ಮಿಗಳು ಪರಾರಿಯಾಗುತ್ತಿರುವ ದೃಶ್ಯಗಳು ದಾಖಲಾಗಿವೆ.
ದೃಶ್ಯಾವಳಿಯನ್ನು ಪರಿಶೀಲಿಸಿರುವ ಪೊಲೀಸರು  ಕಳ್ಳರ ಚಹರೆ ಆಧರಿಸಿ ಶೋಧ ನಡೆಸಿದ್ದಾರೆ. ಪೊಲೀಸರು ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬಂದ ಹಿನ್ನೆಲೆಯಲ್ಲಿ ನಡೆಯಲಿದ್ದ ಕಳ್ಳತನವೊಂದು ತಪ್ಪಿದಂತಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ