ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರಿಗೆ ನೇಮಕಾತಿ ಆದೇಶ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

Kannada News

06-07-2017

ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರಿಗೆ ನೇಮಕಾತಿ ಆದೇಶ ನೀಡುವಂತೆ ‌ ಒತ್ತಾಯಿಸಿ, ಸ್ವಾತಂತ್ರ್ಯ ಉದ್ಯಾನ ವನದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗಿದೆ. ಕಳೆದ 2015, ಜನವರಿಯಲ್ಲಿ ಹುದ್ದೆಗಾಗಿ ಅರ್ಜಿ ಕರೆದು, ಎರಡು ವರ್ಷಕಳೆದಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಇದುವರೆಗೂ ನೇಮಕಾತಿ ಆದೇಶ ನೀಡಿಲ್ಲ. ಈ ಹಿನ್ನಲೆಯಲ್ಲಿ ಶೀಘ್ರವಾಗಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಪ್ರತಿಭಟನಾ ನಿರತ ಉದ್ಯೋಗ ಆಕಾಂಕ್ಷಿಗಳು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕಾಯಾಗಿರುವ ನೂರಾರು ಆಕಾಂಕ್ಷಿಗಳು ಭಾಗವಹಿಸಿದ್ದರು.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ