ಟಾಟಾ ಸುಮೋಗೆ ಲಾರಿ ಡಿಕ್ಕಿ

Kannada News

06-07-2017

ಹುಬ್ಬಳ್ಳಿ : ಹುಬ್ಬಳ್ಳಿ ಹೊರವಲಯದ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಳ ಗ್ರಾಮದ ಬಳಿ ಟಾಟಾ ಸುಮೋಗೆ ಲಾರಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ರೀತಿಯಲ್ಲಿ ಟಾಟಾ ಸುಮೋದಲ್ಲಿನ ಪ್ರಯಾಣಿಕರು ಪಾರಾಗಿದ್ದಾರೆ. ಪಾಳ ಗ್ರಾಮ ಹುಬ್ಬಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ  ಗ್ರಾಮ. ಹಿಂಬದಿಯಿಂದ ಬಂದ ಲಾರಿ ಟಾಟಾ ಸುಮೋಗೆ ಡಿಕ್ಕಿ ಹೊಡೆದ ಪರಿಣಾಮ ಸುಮೋದಲ್ಲಿದ್ದ ಮೈಸೂರು ಮೂಲದ ನಾಲ್ಕೈದು ಜನರಿಗೆ ಗಾಯವಾಗಿದ್ದು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ