ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು !

Kannada News

07-07-2017

ಕೋಲಾರ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿರುವ ಘಟನೆ ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಓಬಟ್ಟಿ ಗ್ರಾಮದ ನಿವಾಸಿ ಕೆಂಪಮ್ಮ(25) ಮೃತ ಬಾಣಂತಿ. ಕಳೆದ ರಾತ್ರಿ ನಾರ್ಮಲ್ ಹೆರಿಗೆಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮೃತ ಬಾಣಂತಿ, ಹೆಚ್ಚಿನ ರಕ್ತಸ್ರಾವದಿಂದ ಮೃತ ಪಟ್ಟಿದ್ದೂ, ವೈದ್ಯರು ಸರಿಯಾದ ಚಿಕಿತ್ಸೆ ನೀಡದೆ ಆರೋಗ್ಯವಾಗಿದ್ದ ಬಾಣಂತಿ ಸಾವಿಗೆ ವೈದ್ಯರೇ ಕಾರಣ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ, ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ