ಮಂಡ್ಯದಲ್ಲಿ ಮುಂದುವರೆದ ಹೋರಾಟ!

Kannada News

07-07-2017

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರೆದಿದೆ. ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಇಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ಜಿಲ್ಲೆಯ ಮದ್ದೂರಮ್ಮ ಕೆರೆಗೆ ಜಾನುವಾರುಗಳನ್ನು ಕರೆತಂದು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಖಾಲಿಯಾಗಿರುವ ಕೆರೆಗೆ ಜಾನುವಾರುಗಳನ್ನು ಕರೆತಂದು ತಮಿಳುನಾಡಿಗೆ ನೀರುನ್ನು ಬಿಡದಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ