ಮಂಡ್ಯ-ಮೈಸೂರಿನಲ್ಲಿ ನಿಲ್ಲದ ಪ್ರತಿಭಟನೆ !

Kannada News

08-07-2017

ಮೈಸೂರು: ಕೆ.ಆರ್.ಎಸ್ ಮತ್ತು ಕಬಿನಿ ಜಲಾಶಯಗಳಿಂದ ನೆರೆಯ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಿಲುವು ಖಂಡಿಸಿ ಮೈಸೂರಿನಲ್ಲಿ ಇಂದೂ ಕೂಡ ಪ್ರತಿಭಟನೆ ಮುಂದುವರೆದಿದೆ. ಮೈಸೂರು ಕನ್ನಡ ವೇದಿಕೆ ಸಂಘಟನೆ ಕಾರ್ಯಕರ್ತರು  ಕಾಡಾ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಮಂಡ್ಯದಲ್ಲಿಯೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವುದನ್ನು ವಿರೋಧಿಸಿ  ಧರಣಿ ಮುಂದುವರೆದಿದೆ. ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು, ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮದ್ದೂರಮ್ಮ ಕೆರೆಯಲ್ಲಿ ಧರಣಿ ನಡೆಸುತ್ತಿದ್ದಾರೆ. ನಿನ್ನೆ ಜಾನುವಾರುಗಳೊಂದಿಗೆ ಖಾಲಿ ಕೆರೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಜೊತೆಗೆ ಅಹೋರಾತ್ರಿ ಧರಣಿ ನಡೆಸಿದ್ದರು. ಇವರ ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ. ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಿ, ಜಿಲ್ಲೆಯ ಕೆರೆ ತುಂಬಿಸಲು ಕಾರ್ಯಕರ್ತರು ಒತ್ತಾಯಿಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ