ಉಡುಪಿ ಕೃಷ್ಣ ಮಠಕ್ಕೆ ಪರಮೇಶ್ವರ್ ಭೇಟಿ !

Kannada News

08-07-2017

ಉಡುಪಿ: ಕೃಷ್ಣ ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಭೇಟಿ ನೀಡಿದ್ದಾರೆ. ಕೃಷ್ಣ ಮಠದಲ್ಲಿ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಇವರು ಸ್ವಾಮೀಜಿ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಮಾಜದಲ್ಲಿ ಸಾಮರಸ್ಯ ಇರಬೇಕು ಎಂದು ಸ್ವಾಮೀಜಿ ಇಫ್ತಾರ್ ಕೂಟ ಏರ್ಪಡಿಸಿದ್ದನ್ನು ನಾವು ಬೆಂಬಲಿಸುತ್ತೇವೆ, ಅವರ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದರು. ಪರಮೇಶ್ವರ್ ಮಾತನಾಡಿ ಕಲ್ಲಡ್ಕ ಗಲಭೆ ವಿಚಾರ ಇಂತಹ ಘಟನೆ ಆಗಬಾರದು. ಕರಾವಳಿಯಲ್ಲಿ ಇತ್ತೀಚೆಗೆ ಇದು ಹೆಚ್ಚಾಗುತ್ತಿದೆ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಇದಕ್ಕೆ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಬಿಜೆಪಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದಿನ ಚುನಾವಣೆಯ ಕುರಿತು ಮಾತನಾಡಿದ ಅವರು, ಟಿಕೆಟ್ ಹಂಚಿಕೆ ವಿಚಾರ ನಾವು ಎಲ್ಲಾ ಸಚಿವರನ್ನು ಗಮನಿಸುತ್ತೇವೆ. ಈ ಕುರಿತು ವರದಿಯನ್ನು ತರಿಸಿಕೊಳ್ಳುತ್ತೇವೆ, ಹಾಗೂ  ಸರ್ವೇಗಳನ್ನು ನಡೆಸಿ ಅದರ ಆಧಾರದ ಮೇಲೆ ವಸ್ತು ಸ್ಥಿತಿ ಅರಿತು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು. ಯುಡಿಯೂರಪ್ಪ ದಲಿತರ ಮನೆ ಭೇಟಿ ನೀಡುತ್ತಿರುವ ವಿಚಾರಕ್ಕೆ ಪ್ರತ್ರಿಕ್ರಿಯೆ ನೀಡಿದ ಅವರು, ನಾಟಕೀಯ ರಾಜಕಾರಣಕ್ಕಾಗಿ ಇದನ್ನು ಮಾಡುತ್ತಿದ್ದಾರೆ. ಯುಡಿಯೂರಪ್ಪ ಜನರನ್ನು ತಪ್ಪು ದಾರಿಗೆ ಒಯ್ಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ಯುಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ದಲಿತರ ಸಮಸ್ಯೆಗೆ ಸ್ಪಂದಿಸಿಲ್ಲ, ಇದು ಕೇವಲ ರಾಜಕಾರಣ ಅಂತಾ ಇಡೀ ಜಗತ್ತಿಗೆ ಗೊತ್ತಾಗುತ್ತಿದೆ ಎಂದರು.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ