ನಾಳೆ ಸುಪ್ರೀಂ ಮುಂದೆ ಕಾವೇರಿ ವಿಚಾರ !

Kannada News

10-07-2017 195

ಮಂಡ್ಯ: ನಾಳೆಯಿಂದ ಸುಪ್ರೀಂ‌ ಕೋರ್ಟ್‌ ನಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಚಾರಣೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲಾಧ್ಯಂತ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ಮತ್ತು ಕೆ.ಆರ್‌.ಎಸ್ ಅಣೆಕಟ್ಟು ಬಳಿಯೂ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರತಿಭಟನಾಕಾರರಿಂದ ಸಾರ್ವಜನಿಕ, ಖಾಸಗಿ ಸ್ವತ್ತುಗಳು ನಾಶಪಡಿಸಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ನದಿ ನೀರು ಹಂಚಿಕೆ ವಿಚಾರವಾಗಿ ಕಳೆದ ಬಾರಿ ಸುಪ್ರೀಂ ಕೋರ್ಟ್ ವಿಚಾರಣೆ ವೇಳೇ ರಾಜ್ಯಾದ್ಯಂತ ತೀವ್ರ ಹೋರಾಟಗಳು ನಡೆದಿದ್ದವು. ಮತ್ತು ಸಾಕಷ್ಟು ಸಾರ್ವಜನಿಕ ಆಸ್ತಿಗಳಿಗೂ ಹಾನಿಯಾಗಿತ್ತು. ಆದ್ದರಿಂದ ಇದೀಗ ಪೊಲೀಸರು ಸೂಕ್ಷ್ಮ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.   
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ