ತಮಿಳುನಾಡಿಲ್ಲಿ ಬೈಕ್ ಕದ್ದು, ಮೈಸೂರಿನಲ್ಲಿ ಮಾರುತ್ತಿದ್ದರು !

Kannada News

10-07-2017

ಮೈಸೂರು: ತಮಿಳುನಾಡಿನಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಮೈಸೂರಿನಲ್ಲಿ ಮಾರಾಟ ಮಾಡುತ್ತಿದ್ದ  ಆರೋಪಿಗಳಿಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಕುಂಬಾರಕೊಪ್ಪಲು ನಿವಾಸಿ ಮಾದೇಶ (35) ಶಾರದಾದೇವಿ ನಗರದ ನಿವಾಸಿ ವಸಂತ (37) ಬಂಧಿತ ಆರೋಪಿಗಳು. ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬೈಕ್  ಕಳ್ಳರನ್ನು ಬಂಧಿಸಿದ್ದಾರೆ. ಮೈಸೂರಿನಲ್ಲಿ ಕಳ್ಳತನ ಮಾಡಿದರೆ ಪೋಲೀಸರಿಗೆ ಸಿಕ್ಕಿ ಬೀಳುತ್ತೇವೆಂದು ಭಾವಿಸಿ, ತಮಿಳುನಾಡಿಗೆ ಹೋಗಿ ಬೈಕ್ ಗಳನ್ನು ಕದ್ದ ನಂತರ, ಮೈಸೂರಿಗೆ ಬಂದು ಮಾರಾಟ ಮಾಡುತ್ತಿದ್ದ ಸಂಗತಿ ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ತಮಿಳುನಾಡಿನಲ್ಲಿ ಕಳ್ಳತನ ಮಾಡಿದ್ದ ಬೈಕ್ ಗಳನ್ನು ಮೈಸೂರಿನಲ್ಲಿ ಮಾರಾಟ ಮಾಡುತ್ತಿದ್ದಾಗಲೇ ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ ಮೂರು ಬೈಕ್ ಮತ್ತು 1.10 ಲಕ್ಷ ಮಾಲ್ಯದ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ