ಖಾಲಿ ಕೊಡ ಹಿಡಿದು ಪ್ರತಿಭಟನೆ !

Kannada News

10-07-2017

ಮೈಸೂರು: ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ, ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ನ್ಯಾಯಾಲಯದ ಬಳಿಯಿರುವ ಮಹಾತ್ಮಗಾಂಧೀಜಿ ಪ್ರತಿಮೆ ಮುಂಭಾಗದಲ್ಲಿ ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದಿಂದ ಪ್ರತಿಭಟನೆ ನಡೆಸಿದ್ದೂ, ಕೆ.ಆರ್.ಎಸ್ ಮತ್ತು ಕಬಿನಿ ಜಲಾಶಯಗಳು ಭರ್ತಿಯಾಗುವ ಮೊದಲೇ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ನಿಲುವು ಖಂಡಿಸಿ, ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮತ್ತು ಈ ಕೂಡಲೆ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಸಿಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ