ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 26ಕ್ಕೆ ಏರಿಕೆ !

Kannada News

10-07-2017

ನವದೆಹಲಿ: ಉತ್ತರ ಮತ್ತು ಪೂರ್ವ ಭಾರತದ ಹಲವೆಡೆ ಮಳೆ ಹಾಗೂ ಸಿಡಿಲಿನ ಅಬ್ಬರ ಜೋರಾಗಿದೆ. ಅಸ್ಸಾಂ ನಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದ್ದು, ಇದುವರೆಗೂ 26 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶ ಹಾಗೂ ಬಿಹಾರದ ವಿವಿಧೆಡೆ ಸಿಡಿಲು ಬಡಿದು 19 ಜನ ಮೃತಪಟ್ಟಿದ್ದಾರೆ. ಆದ್ರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇನ್ನೂ ಬಿಸಿಲಿನ ತಾಪಮಾನ ಮುಂದುವರಿದಿದೆ. ಅಸ್ಸಾಂ ನ 15 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ಸರಿ ಸುಮಾರು 5 ಲಕ್ಷ ಮಂದಿ ನಿರಾಶ್ರಿತರಾಗಿದ್ದಾರೆ. ಇಲ್ಲಿನ ಕರೀಮ್‌‌ಗಂಜ್‌ ಜಿಲ್ಲೆಯಲ್ಲಿ ಭಾನುವಾರ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇದರಿಂದ ಮೃತರ ಸಂಖ್ಯೆಕ್ಕೆ 26ಕ್ಕೇರಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ