ಕಾಂಗ್ರೆಸ್ ಮುಖಂಡರಿಗೆ ಕಾರ್ಯಕರ್ತರಿಂದ ಎಚ್ಚರಿಕೆ !

Kannada News

10-07-2017

ಮಂಡ್ಯ: ಜೆಡಿಎಸ್ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಭೆಯಲ್ಲಿ ಈ ಕುರಿತು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲು ಪಕ್ಷಕ್ಕೆ ಬರುವವರಿಂದ ದುಡಿಸಿ, ನಂತರ ಟಿಕೆಟ್ ಕೊಡಿ. ಅಲ್ಲದೇ ಈ ಬಾರಿ ಮೂಲ ಕಾಂಗ್ರೆಸ್ಸಿಗರಿಗೆ ಮಾತ್ರ ಟಿಕೆಟ್ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ. ವಲಸೆ ಬಂದವರಿಗೆ ಟಿಕೆಟ್ ಕೊಟ್ಟರೆ ಪಕ್ಷಕ್ಕೆ ವಿರೋಧವಾಗಿ ಕೆಲಸ ಮಾಡಬೇಕಾಗಿತ್ತದೆ ಎಂದು ಎಚ್ಚರಿಸಿದ್ದಾರೆ.  ಶ್ರೀರಂಗಪಟ್ಟಣ ಪ್ರವಾಸಿ ಮಂದಿರದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಈ ರೀತಿಯ ಕಾಂಗ್ರೆಸ್ ಕಾರ್ಯಕರ್ತರ ಕೂಗು ಕೇಳಿ ಬಂದಿದೆ. ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್, ದಿನೇಶ್‌ ಗುಂಡೂರಾವ್ ಭಾಗಿಯಾಗಿದ್ದರು. ಸಭೆಯಲ್ಲಿ ಮುಖಂಡರಿಗೆ ಕಾರ್ಯಕರ್ತರಿಂದ ನೇರ ಎಚ್ಚರಿಕೆ ನೀಡಿದ್ದು, ಜೆಡಿಎಸ್‌ನಿಂದ ಅಮಾನತ್ತಾದ ಶಾಸಕ ರಮೇಶ್‌ ಬಂಡಿಸಿದ್ದೇಗೌಡರಿಗೆ ಟಿಕೆಟ್ ಕೊಡದಂತೆ ಆಗ್ರಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ