ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ !

Kannada News

11-07-2017

ಮೈಸೂರು: ಆರ್.ಎಸ್.ಎಸ್. ಕಾರ್ಯಕರ್ತರ ಸರಣಿ ಕೊಲೆ ಪ್ರಕರಣಗಳನ್ನು ಖಂಡಿಸಿ, ಮೈಸೂರಿನಲ್ಲಿ ಪ್ರತಿಭಟನೆ ನಡೆದಿದೆ. ಹಿಂದು ಜಾಗರಣ ವೇದಿಕೆ, ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ಕೊಲೆಗೀಡಾದ ಶರತ್ ಮಡಿವಾಳರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ, ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ, ಧಿಕ್ಕಾರದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪಿ.ಎಫ್.ಐ, ಎಸ್‌.ಡಿ.ಪಿ.ಐ. ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ಶರತ್ ಮಡಿವಾಳರ ಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು, ಇದೇ ವೇಳೆ ಒತ್ತಾಯಿಸಿದ್ದಾರೆ. ಮಾಜಿ ಸಚಿವ ಎಸ್.ಸುರೇಶ್ ಕುಮಾರ್, ಬಿಜೆಪಿ ನಗರಾಧ್ಯಕ್ಷ ಡಾ.ಮಂಜುನಾಥ್, ಮಹಾನಗರ ಪಾಲಿಕೆ ಸದಸ್ಯ ಎಂ.ಕೆ.ಶಂಕರ್, ಸೇರಿದಂತೆ ಹಿಂದೂಪರ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ