ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ !

Kannada News

11-07-2017

ಮೈಸೂರು: ಅಕ್ರಮವಾಗಿ ತಲೆ ಎತ್ತಿರುವ ಮದ್ಯದಂಗಡಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ತಾಲ್ಲೂಕಿನ ಚೋರನಹಳ್ಳಿ ಗ್ರಾಮಸ್ಥರು ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ. ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ನೋಟಿಫೈ ಮಾಡಿರುವ ಸ್ಥಳದಲ್ಲಿ ಮದ್ಯದ ಅಂಗಡಿ ತಲೆ ಎತ್ತಿದೆ ಎಂದು ಆರೋಪಿಸಿದ ಚೋರನಹಳ್ಳಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಮದ್ಯದ ಅಂಗಡಿಯನ್ನು ತೆರುವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರೂ, ಜಿಲ್ಲಾಡಳಿತ ಸ್ಪಂದಿಸಿಲ್ಲ, ಇದರಿಂದ ಹಲವಾರು ತೊಂದರೆಗಳಾಗುತ್ತಿದ್ದೂ, ಮದ್ಯದಂಗಡಿ ತೆರವುಗೊಳಿಸುವವರೆಗೂ ಅನಿರ್ಧಿಷ್ಟಾವಧಿ ಧರಣಿ ಪ್ರತಿಭಟನೆ ಮುಂದುವರೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ