ಪೊಲೀಸ್ ಪೇದೆಗೆ ಹಲ್ಲೆ ಮಾಡಿದ್ದ ಯುವಕರ ಬಂಧನ !

Kannada News

11-07-2017

ಮಂಡ್ಯ: ಕುಡಿದ ಮತ್ತಿನಲ್ಲಿ, ಗಸ್ತಿನಲ್ಲಿದ್ದ ಪೇದೆ ಮತ್ತು ಹೋಂಗಾರ್ಡ್ ಮೇಲೆ ಹಲ್ಲೆ ಮಾಡಿರುವ, ಮೂವರು ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ, ಶೆಟ್ಟಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಶ್ರೀಕಾಂತ್, ಜಯಲಿಂಗ, ಹರ್ಷಿತ್  ಬಂಧಿತ ಆರೋಪಿಗಳು. ನಿನ್ನೆ ರಾತ್ರಿ ಗ್ರಾಮದ ಶಾಲಾ ಆವರಣದಲ್ಲಿ ಮದ್ಯ ಸೇವಿಸುತ್ತಿದ್ದಾಗ, ಯುವಕರನ್ನು ಪ್ರಶ್ನಿಸಿದ ಪೇದೆ ಸುರೇಶ್, ಹೋಂಗಾರ್ಡ್ ಶಶಿಧರ್ ಮೇಲೆ, ಕುಡಿದ ಅಮಲಿನಲ್ಲಿ ಮೂವರು ಯುವಕರು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಇದೀಗ ಮಳವಳ್ಳಿ ಗ್ರಾಮಾಂತರ ಪೊಲೀಸರು ಈ ಮೂವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ