ರಾಜ್ ಠಾಕ್ರೆಗೆ, ನಾರಾಯಣಗೌಡರಿಂದ ಪತ್ರ !

Kannada News

12-07-2017

ಬೆಳಗಾವಿ: ಹಿಂದಿಯೇತರ ರಾಜ್ಯಗಳ ಮೇಲೆ ಒತ್ತಾಪೂರ್ವಕ ಹಿಂದಿ ಹೇರಿಕೆ ವಿಚಾರವಾಗಿ, ಕೇಂದ್ರ ಸರ್ಕಾರದ ವಿರುದ್ದ ಹೋರಾಟಕ್ಕೆ ಕೈಜೋಡಿಸುವಂತೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷರಾದ ರಾಜ್ ಠಾಕ್ರೆಗೆ, ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಹಿಂದಿಯನ್ನ ಬಲವಂತವಾಗಿ ಹೇರುತ್ತಿದೆ. ಕೇಂದ್ರ ಸರ್ಕಾರ ಪ್ರಾದೇಶಿಕ ಭಾಷೆಗಳನ್ನ ಕಡೆಗಣಿಸುತ್ತಿದೆ. ಆಯಾ ರಾಜ್ಯಗಳಲ್ಲಿ ಸ್ಥಳೀಯ ಭಾಷೆಗೆ ಮೊದಲು ಪ್ರಾಮುಖ್ಯತೆ ಕೊಡಬೇಕು ಎಂದು ಹೇಳಿದ್ದಾರೆ, ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ, ಹಿಂದಿ ಭಾಷೆಯನ್ನು ಬಲವಂತವಾಗಿ ಎಲ್ಲಾ ಕಡೆ ಬಳಸುವಂತೆ ಹಿಂದಿಯೇತರ ರಾಜ್ಯಗಳ ಮೇಲೆ ಹೇರುತ್ತಿದೆ. ಮುಂದಿನ ದಿನಗಳಲ್ಲಿ ನಾವು ನಡೆಸುವ ಹೋರಾಟಕ್ಕೆ ನೀವು ಬೆಂಬಲ ನೀಡಿ, ನಾವು ನಿಮಗೆ ಬೆಂಬಲ ನೀಡುತ್ತೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ